Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:24 - ಕನ್ನಡ ಸತ್ಯವೇದವು J.V. (BSI)

24 ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಉಲ್ಲ್ಯಾಂಚಿ ಪಾಪಾ ಎಗ್ದಮ್ ದಿಸುನ್ ಯೆತಾತ್, ಅನಿ ತಿ ತ್ಯೆಂಚ್ಯಾಕಿ ಅದ್ದಿಚ್ ಇಚಾರ್ನಿಕ್ ಜಾವ್ನ್ ಪಾವ್ತಾತ್; ಖರೆ ಉಲ್ಲ್ಯಾಂಚಿ ಪಾಪಾ ಮಾನಾ ಎವ್ಡಿಚ್ ದಿಸುನ್ ಯೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:24
9 ತಿಳಿವುಗಳ ಹೋಲಿಕೆ  

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮದಾನವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು ಅವರ ಮುಂದಿಟ್ಟು -


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ?


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು