Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:3 - ಕನ್ನಡ ಸತ್ಯವೇದವು J.V. (BSI)

3-4 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3-4 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಿಕ್ಕಿಲ್ಲದ ವಿಧವೆಯರನ್ನು ಪರಿಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆಚ್ ದಿಕ್ಕ್ ನತ್ತ್ಯಾ ಘೊವ್‍ ಮರಲ್ಲ್ಯಾ ಬಾಯ್ಕೊಮನ್ಸಾಕ್ನಿ ಮಾನ್ ಮರ್ಯಾದ್ ದಿ ತೆಂಕಾ ತೆಚಿ ಗರಜ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:3
28 ತಿಳಿವುಗಳ ಹೋಲಿಕೆ  

ಅವರು - ಪರದೇಶಿ, ತಾಯಿತಂದೆಯಿಲ್ಲದವ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.


ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ?


ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.


ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು