Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಎಕ್ ಘೊವ್ ಮರಲ್ಲಿ ಬಾಯ್ಕೊಮನುಸ್ ತಿಜಿ ಅಂಗಾಚಿ ಆಶಾ ಪುರಾ ಕರುಕ್ ತಿಚೆ ಆಂಗ್ ತಿನಿ ವಾಪ್ರುನ್ ಘೆಟ್ಲ್ಯಾರ್, ತಿ ಝಿತ್ತಿ ರ್‍ಹಾಲ್ಯಾರ್‍ಬಿ ಮರಲ್ಲ್ಯಾ ಸರ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:6
29 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.


ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.


ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.


ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಫೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಇವರೊಳಗೆ ಸೇರಿದವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು