Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:8 - ಕನ್ನಡ ಸತ್ಯವೇದವು J.V. (BSI)

8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜರ್ ಕೊನ್ ಅಪ್ನಾಚ್ಯಾ ಸೊಯ್ರ್ಯಾಂಚಿ ಕಾಳಜಿ ಘೆಯ್ನ್ಯಾಸಿ ಅನಿ ಲೈ ಕರುನ್ ಅಪ್ನಾಚ್ಯಾ ಘರಾತ್ಲ್ಯಾ ಲೊಕಾಂಚಿ ತರ್ ತೆನಿ ವಿಶ್ವಾಸ್ ಸೊಡ್ಲ್ಯಾನಾತ್ ಅನಿ ದೆವಾಕ್ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾನ್ಕಿ ಬುರ್ಶಿ ತೆಂಚಿ ಪರಿಸ್ತಿತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:8
19 ತಿಳಿವುಗಳ ಹೋಲಿಕೆ  

ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.


ನಿನ್ನ ಕೃತ್ಯಗಳನ್ನು ಬಲ್ಲೆನು; ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನಗೆ ಸೇರಿದವನಲ್ಲವೆಂದು ಹೇಳದೆ ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ, ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ; ಯಾರೂ ಅದನ್ನು ಮುಚ್ಚಲಾರರು.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?


ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.


ಸಹೋದರನು ಸಹೋದರನ ಮೇಲೆ ವ್ಯಾಜ್ಯವಾಡುವದು ಅಲ್ಲದೆ ಅದನ್ನು ಕ್ರಿಸ್ತಭಕ್ತರಲ್ಲದವರ ಮುಂದೆ ತೆಗೆದುಕೊಂಡು ಹೋಗುವದು ಸರಿಯೋ? ನಿಮ್ಮ ನಿಮ್ಮಲ್ಲಿ ವ್ಯಾಜ್ಯವಾಡುವದೇ ನೀವು ಸೋತವರೆಂಬದಕ್ಕೆ ಗುರುತು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು