1 ತಿಮೊಥೆಯನಿಗೆ 6:11 - ಕನ್ನಡ ಸತ್ಯವೇದವು J.V. (BSI)11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಖರೆ ತಿಯಾ, ದೆವಾಚೊ ಪೊರ್ ಹೊವ್ನ್ ಹಾಸ್, ತಸೆ ಹೊವ್ನ್ ಹ್ಯಾ ಸಗ್ಳ್ಯಾ ಸಂಗ್ತಿಯಾನಿಕ್ನಾ ಧುರ್ ರ್‍ಹಾ ಅನಿ ಬರೆಪಾನಾಚೊ, ದೆವಸ್ಪಾನಾಚಿ ಸೆವಾ ಕರ್‍ತಲೊ, ವಿಶ್ವಾಸಾಚೊ, ಪ್ರೆಮಾಚೊ, ಥಂಡ್‍ಪಾನಾಚೊ, ಅನಿ ಬೊಳೆಪಾನಾಚೊ ಹೊವ್ನ್ ರ್‍ಹಾ. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.