Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:2 - ಕನ್ನಡ ಸತ್ಯವೇದವು J.V. (BSI)

2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:2
31 ತಿಳಿವುಗಳ ಹೋಲಿಕೆ  

ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ.


ಈ ಸಂಗತಿಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.


ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.


ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು