Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:20 - ಕನ್ನಡ ಸತ್ಯವೇದವು J.V. (BSI)

20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಿಮೊತಿ, ತುಜ್ಯಾ ಬರೆಪಾನಾಸಾಟಿ ಮನುನ್ ತುಕಾ ದಿವ್ನ್ ಹೊಲ್ಲ್ಯಾ ಗೊಸ್ಟಿಯಾ ಬರೆ ಕರುನ್ ಸಂಬಾಳ್. ಹ್ಯಾ ಜಗಾತ್ ಉಲ್ಲಿ ಲೊಕಾ “ಶಾನ್‍ಪಾನ್” ಮನುನ್ ಬಲ್ವುತಲ್ಯಾ ದೆವಸ್ಪಾನ್ ನಸಲ್ಲ್ಯಾ ಗೊಸ್ಟಿಯಾನಿತ್ನಾ ಅನಿ ವಿರೊದ್ ಕರ್‍ತಲ್ಯಾಂಚ್ಯಾ ಝುಟ್ಯಾ ಬೊಲ್ನ್ಯಾತ್ನಾ ಧುರ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:20
30 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೆ ದೂರವಾಗಿರು; ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು.


ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರಗಳಿಗೆ ತಿರುಗಿಕೊಂಡಿದ್ದಾರೆ;


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು