Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:4 - ಕನ್ನಡ ಸತ್ಯವೇದವು J.V. (BSI)

4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಗರುಕಿನ್ ಫುಗ್ಲಾ ಅನಿ ತೆಕಾ ಕಾಯ್ಬಿ ಕಳಿನಾ. ತೊ ಪಾಯ್ದ್ಯಾಕ್ ಪಡಿನಸಲ್ಯಾ ಆಶ್ಯಾನಿ ಖರ್‍ಯಾ ಗೊಸ್ಟಿಯಾಂಚ್ಯಾ ವಿಶಯಾತ್ ವಾದಿಕ್‍ ವಾದ್ ಕರ್‍ತಾ ಅನಿ ಗೊಸ್ಟಿಯಾಂಚೊ ಝಗ್ಡೊ ಕರ್‍ತಾ. ಹೆಚ್ಯಾ ವೈನಾ ಖುದ್ಗೆಪಾನ್, ಎಕಾಮೆಕಾತ್ನಿ ಪಡುನ್‍ ಯೆಯ್‍ನಸಲ್ಲೆ, ನಿಂದಾ ಅನಿ ಬುರ್ಶಿ ಗಾಳಿಯಾ ದಿತಲೆ ಯೆತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:4
44 ತಿಳಿವುಗಳ ಹೋಲಿಕೆ  

ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.


ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ


ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.


ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಒಬ್ಬನು ಧನವನ್ನು ಸಂಗ್ರಹಿಸಿದರೂ ಏನೂ ಇಲ್ಲದ ದರಿದ್ರನೇ; ಮತ್ತೊಬ್ಬನು ಧನವನ್ನೆಲ್ಲಾ ವ್ಯಯಮಾಡಿ ಬಡವನಾದರೂ ಬಹು ಐಶ್ವರ್ಯವಂತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು