Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನಂಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ಮಕೆದೋನ್ಯ ಹಾಗೂ ಅಖಾಯದ ವಿಶ್ವಾಸಿಗಳೆಲ್ಲರಿಗೂ ನೀವು ಆದರ್ಶರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ ತುಮಿ ಮೆಸಿದೊನಿಯಾತ್ಲ್ಯಾ ಅನಿ ಅಖಾಯಿಯಾತ್ಲ್ಯಾ ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಸಗ್ಳ್ಯಾ ಲೊಕಾತ್ನಿ ಎಕ್ ಉದಾರನ್ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:7
14 ತಿಳಿವುಗಳ ಹೋಲಿಕೆ  

ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;


ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು