Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:1 - ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾವು ಸುಮ್ಮಸುಮ್ಮಗೆ ನಿಮ್ಮಲ್ಲಿಗೆ ಬರಲಿಲ್ಲವೆಂಬದನ್ನೂ ನಿಮಗೆ ತಿಳಿದಿರುವ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲ ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ತುಮ್ಚ್ಯಾ ಮದ್ದಿ ಯೆಲ್ಲೆ ಕವ್ಡೆ ಫಾಯ್ದ್ಯಾಕ್ ಪಡ್ಲೆ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:1
18 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.


ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು