Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:12 - ಕನ್ನಡ ಸತ್ಯವೇದವು J.V. (BSI)

12 ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮ್ಕಾ ಹರಿಎಕ್ಲ್ಯಾಕ್ನಿ ಅಮಿ ಉಮ್ಮೆದ್ ದಿಲಾಂವ್, ಅನಿ ಸಮಾದಾನ್ ಸಾಂಗ್ಲಾಂವ್ ಅನಿ ಅಪ್ನಾಚ್ಯಾ ರಾಜಾತ್ ಅನಿ ಮಹಿಮೆತ್ ಭಾಗ್ ಘೆವ್ಕ್ ಮನುನ್ ಬಲ್ವಲ್ಲ್ಯಾ ದೆವಾಕ್ ಪಸಂದ್ ಯೆಯ್ ಸಾರ್ಕೆ; ತುಮ್ಚಿ ಜಿವನಾ ಚಾಲ್ವುನ್ ಘೆವ್ನ್ ಜಾವ್ಚೆ ಮನುನ್ ಅಮಿ ತುಮ್ಚೆಕ್ಡೆ ಮಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:12
29 ತಿಳಿವುಗಳ ಹೋಲಿಕೆ  

ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.


ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಿಮ್ಮನ್ನು ಕರೆಯುವವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನಾನು ಹೇಳುವದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವದಿಲ್ಲ.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು.


ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು