Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:15 - ಕನ್ನಡ ಸತ್ಯವೇದವು J.V. (BSI)

15 ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜುದೆವಾನಿ ಜೆಜುಕ್ ಅಮ್ಚ್ಯಾ ಧನಿಯಾಕ್ ಅನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ, ಅನಿ ಅಮ್ಕಾಬಿ ತರಾಸ್ ದಿಲ್ಯಾನಿ. ತೆನಿ ದೆವಾಚ್ಯಾ ದಿಸ್ಟಿಕ್ ಲೈ ವಾಯ್ಟ್ ದಿಸ್ತಲೆ ಕರುಲ್ಯಾತ್, ಸಗ್ಳ್ಯಾ ಲೊಕಾಕ್ನಿ ತೆನಿ ವಿರೊದ್ ಹೊವ್ನ್ ಹಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:15
21 ತಿಳಿವುಗಳ ಹೋಲಿಕೆ  

ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಆತನನ್ನು ಮಹಾಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.


ಅನಂತರ ಅಮಚ್ಯನು ಆಮೋಸನಿಗೆ - ಕಣಿಯವನೇ, ನಡೆ, ಯೆಹೂದದೇಶಕ್ಕೆ ಓಡಿಹೋಗು; ಅಲ್ಲೇ ಪ್ರವಾದನೆಮಾಡುತ್ತಾ ಹೊಟ್ಟೆಹೊರಕೋ;


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ನನ್ನನ್ನು ಎದುರಿಸಿ ಕೀಳುಮಾತಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು