Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:16 - ಕನ್ನಡ ಸತ್ಯವೇದವು J.V. (BSI)

16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸೈತ್ ಸುಟ್ಕಾ ದಿತಲಿ ಬರಿ ಖಬರ್ ಸಾಂಗುಕ್ ತೆನಿ ಅಮ್ಕಾ ಅಡ್ಕಳ್ ಕರಲ್ಲ್ಯಾನಿ, ಎವ್ಡೆ ಪತರ್ ತೆನಿ ಕರಲ್ಲ್ಯಾ ಪಾಪಾಂಚೊ ಮಾಪ್ ಭರುನ್ ವೊತುಕ್ ಲಾಗ್ಲಾ. ಅತ್ತಾ ಆಕ್ರಿಕ್ ದೆವಾಚೊ ರಾಗುಚ್ ತೆಂಚ್ಯಾ ವರ್‍ತಿ ಉತ್ರುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:16
52 ತಿಳಿವುಗಳ ಹೋಲಿಕೆ  

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.


ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ನಾನಾದರೆ ಸಹೋದರರೇ, ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ಹೋಯಿತಲ್ಲಾ?


ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು.


ಅನೇಕ ದಿವಸಗಳು ಹೋದ ಮೇಲೆ ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆಮಾಡಿಕೊಂಡರು.


ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ - ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥಮಾಡಿಕೊಂಡರು.


ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.


ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ -


ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು