Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:17 - ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಹೋದರ ಸಹೋದರಿಯರೇ, ನಿಮ್ಮಿಂದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿಂದ ಬಹಳ ಪ್ರಯತ್ನಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮ್ಕಾ ತರ್, ಭಾವಾನು ಅನಿ ಭೆನಿಯಾನು, ಎಕ್ ಉಲ್ಲೊ ಎಳ್ ಅಮಿ ತುಮ್ಚ್ಯಾಕ್ನಾ ಧುರ್ ಹೊಲಾಂವ್ ಹೊಯ್, ತಸೆ ಮಟ್ಲ್ಯಾರ್, ದೊಳ್ಯಾಂಚ್ಯಾ ಇದ್ರಾಕ್ ನಾವ್ ತವ್ಡೆಚ್, ಅಮ್ಚಿ ಮನಾ ಕನ್ನಾಬಿ ತುಮ್ಚ್ಯಾ ವಾಂಗ್ಡಾಚ್ ಹಾತ್. ಅಶೆ ಅಮಿ ಧುರ್ ಹಾವ್, ಖರೆ ಅನಿ ಎಗ್ದಾ ತುಮ್ಕಾ ಭೆಟುಚೆ ಮನ್ತಲಿ ಆಶಾ ಲೈ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:17
16 ತಿಳಿವುಗಳ ಹೋಲಿಕೆ  

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ -


ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಅನುಕೂಲವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವದಕ್ಕೆ ಅನೇಕ ವರುಷಗಳಿಂದ ಅಭಿಲಾಷೆ ಇರುವದರಿಂದಲೂ


ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.


ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು.


ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು