Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:3 - ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ನಮ್ಮ ಬೋಧನೆಯು ಅಬದ್ಧವಲ್ಲ, ಅಶುದ್ಧವಲ್ಲ, ಮೋಸವಲ್ಲ; ದೇವರು ನಮ್ಮನ್ನು ಯೋಗ್ಯರೆಂದೆಣಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ತುಮ್ಕಾ ಶಿಕ್ವಲ್ಲಿ ಬರಿ ಖಬರ್ ಚುಕಿಚಿ ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಚಿ ನ್ಹಯ್, ನಾಹೊಲ್ಯಾರ್ ಕೊನಾಕ್ ಮೊಸ್ ಕರುಚೆ ಮನ್ತಲೆಬಿ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:3
18 ತಿಳಿವುಗಳ ಹೋಲಿಕೆ  

ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ತಿಳಿಯಪಡಿಸಿದೆವು.


ಅದೇ ಕಾರಣದಿಂದ ದೇವರು ಅಸತ್ಯನಡಿಸುವ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಆ ಸುಳ್ಳನ್ನು ನಂಬುವದಕ್ಕೆ ಅವರನ್ನು ಬಿಡುತ್ತಾನೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು