1 ಥೆಸಲೋನಿಕದವರಿಗೆ 2:4 - ಕನ್ನಡ ಸತ್ಯವೇದವು J.V. (BSI)4 ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹೆಚ್ಯಾ ಬದ್ಲಾಕ್, ಕನ್ನಾಬಿ ದೆವಾಕ್ ಕಾಯ್ ಪಾಜೆ ತೆ ಅಮಿ ಬೊಲ್ಲಾಂವ್, ಕಶ್ಯಾಕ್ ಮಟ್ಲ್ಯಾರ್, ತೆನಿ ಅಮ್ಚಿ ಪರಿಕ್ಷಾ ಕರುನ್ ಬಗುನ್, ಅಮಿ ಖಾತ್ರಿಚಿ ಮಾನ್ಸಾ ಮನುನ್ ಅಪ್ನಾಚಿ ಬರಿ ಖಬರ್ ತೆನಿ ಅಮ್ಚ್ಯಾ ತಾಬೆತ್ ದಿಲ್ಯಾನಾಯ್, ಅಮಿ ಮಾನ್ಸಾಂಚ್ಯಾ ಮನಾಕ್ ಬರೆ ದಿಸುಕ್ ನ್ಹಯ್, ಅಮ್ಚಿ ಮನಾ ತಪಾಸುನ್ ಬಗ್ತಲ್ಯಾ ದೆವಾಚ್ಯಾ ಮನಾಕ್ ಬರೆ ದಿಸ್ತಲೆ ಕರ್‍ತಾಂವ್. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.