1 ಥೆಸಲೋನಿಕದವರಿಗೆ 2:5 - ಕನ್ನಡ ಸತ್ಯವೇದವು J.V. (BSI)5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಮಿ ಝುಟ್ಯಾ ಗೊಸ್ಟಿಯಾನಿ ಮಳ್ಳ್ ಕರುಕ್, ನಾ ಹೊಲ್ಯಾರ್, ಪೈಸ್ಯಾಂಚಿ ಆಶಾ ಕರುನ್ ನಾಟಕ್ ಕರುನ್ ದಾಕ್ವುಕ್ ಮನುನ್ ಯೆಲ್ಲೆ ನಾವ್, ದೆವುಚ್ ಹೆಕಾ ಸಗ್ಳ್ಯಾಕ್ ಸಾಕ್ಷಿ! ಅಧ್ಯಾಯವನ್ನು ನೋಡಿ |