1 ಥೆಸಲೋನಿಕದವರಿಗೆ 3:13 - ಕನ್ನಡ ಸತ್ಯವೇದವು J.V. (BSI)13 ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಸೆ, ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ನಾಚ್ಯಾ ಸಗ್ಳ್ಯಾ ಭಕ್ತಾಂಚ್ಯಾ ವಾಂಗ್ಡಾ ದಿಸ್ತಾನಾ, ದೆವಾ ಅಮ್ಚ್ಯಾ ಬಾಬಾಚ್ಯಾ ಇದ್ರಾಕ್ ತುಮಿ ಪವಿತ್ರ್ ಅನಿ ಪರಿಪುರ್ನ್ ಹೊವ್ನ್ ಇಬೆ ರ್‍ಹಾವ್ಕ್ ತೊಚ್ ತುಮ್ಚಿ ಮನಾ ವಿಶ್ವಾಸಾತ್ ಘಟ್ ಕರುಂದಿತ್. ಅಧ್ಯಾಯವನ್ನು ನೋಡಿ |
ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ