1 ಥೆಸಲೋನಿಕದವರಿಗೆ 3:2 - ಕನ್ನಡ ಸತ್ಯವೇದವು J.V. (BSI)2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕ್ರಿಸ್ತಾಚಿ ಬರಿ ಖಬರ್ ಸಾಂಗ್ತಲ್ಯಾ ದೆವಾಚ್ಯಾ ಕಾಮಾತ್ ಅಮ್ಚೊ ವಾಂಗ್ಡಿ ಹೊವ್ನ್ ಅಸಲ್ಲ್ಯಾ ಅಮ್ಚ್ಯಾ ಭಾವಾಕ್ ತಿಮೊತಿಕ್, ತುಮ್ಕಾ ಘಟ್ ಕರುಕ್ ಅನಿ ವಿಶ್ವಾಸಾತ್ ಉಮ್ಮೆದಿನ್ ಭರಿ ಸಾರ್ಕೆ ಕರುಕ್ ಮನುನ್ ಅಮಿ ಧಾಡುನ್ ದಿಲ್ಲಾಂವ್. ಅಧ್ಯಾಯವನ್ನು ನೋಡಿ |