1 ಥೆಸಲೋನಿಕದವರಿಗೆ 3:3 - ಕನ್ನಡ ಸತ್ಯವೇದವು J.V. (BSI)3 ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಸ್ಟಾತ್ನಿ ಅನಿ ತರಾಸಾನಿ ಕೊನ್‍ಬಿ, ಭಿಂವ್ನ್ ದೆವಾ ವೈಲೊ ವಿಶ್ವಾಸ್ ಸೊಡ್ತಲೆ ನಕ್ಕೊ ಮನುನ್ ಅಮಿ ಅಶೆ ಕರ್ಲಾಂವ್. ಅಮಿ ಕಸ್ಟ್ ಸೊಸ್ತಲೆ ದೆವಾಚ್ಯಾ ಮರ್ಜಿ ಪರ್ಕಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.