Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:4 - ಕನ್ನಡ ಸತ್ಯವೇದವು J.V. (BSI)

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿಂಸೆಯನ್ನು ಅನುಭವಿಸಬೇಕಾಗುತ್ತದೆಯೆಂದು ನಿಮಗೆ ತಿಳಿಸಿದೆವು. ನಾವು ಹೇಳಿದಂತೆಯೇ ಅದು ಸಂಭವಿಸಿತು ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಕಾ ಕಸ್ಟ್ ಸೊಸ್ತಲೆ ಪಡ್ತಾ ಮನುನ್, ಅಮಿ ತುಮ್ಕಾ ಅದ್ದಿಚ್ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ಸಾಂಗಟಲ್ಲಾಂವ್, ಅನಿ ತಸೆಚ್ ತುಮ್ಕಾ ಗೊತ್ತ್ ಹೊತ್ತ್ಯಾ ಸಾರ್ಕೆ ಅತ್ತಾ ಚಲುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:4
12 ತಿಳಿವುಗಳ ಹೋಲಿಕೆ  

ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು