1 ಥೆಸಲೋನಿಕದವರಿಗೆ 3:5 - ಕನ್ನಡ ಸತ್ಯವೇದವು J.V. (BSI)5 ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆಚೆಸಾಟ್ನಿ ಮಿಯಾ ಲೈ ಎಳ್ ರಾಕುಕ್ ಹೊಯ್ನಾ. ತೆಚೆಸಾಟ್ನಿ ತುಮ್ಚೊ ವಿಶ್ವಾಸ್ ಕಳ್ವುನ್ ಘೆವ್ಚೆ ನ್ಹಯ್ ಮನುನ್ ತಿಮೊತಿಕ್ ತುಮ್ಚಾಕ್ಡೆ ಧಾಡುನ್ ದಿಲೊ, ಅಶೆ ಹೊವ್ನ್ ಸೈತಾನಾಚ್ಯಾ ಪಾಸಾತ್ ಪಡುನ್ ಅಮ್ಚೆ ಸಗ್ಳೆ ಕಾಮ್ ಹಾಳ್ ಹೊಯ್ ನಸ್ತಾನಾ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |