Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:6 - ಕನ್ನಡ ಸತ್ಯವೇದವು J.V. (BSI)

6 ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಅತ್ತಾ, ತಿಮೊತಿ ಅಮ್ಚೆಕ್ಡೆ ತುಮ್ಚೆಕ್ನಾ ಪರ್ತುನ್ ಯೆಲಾ, ಅನಿ ಯೆತಾನಾ ತುಮ್ಚ್ಯಾ ವಿಶ್ವಾಸಾಚಿ ಅನಿ ಪ್ರೆಮಾಚಿ ಬರಿ ಖಬರ್ ಅಮ್ಕಾ ಘೆವ್ನ್ ಯೆಲಾ, ಕನ್ನಾಬಿ ಅಮ್ಚ್ಯಾ ವಿಶಯಾತ್ ಬರೆಚ್ ಬೊಲ್ತ್ಯಾಸಿ, ಅನಿ ತುಮಿಬಿ ಅಮ್ಕಾ ಭೆಟುಚೆ ಮನುನ್ ವಾಟ್ ಬಗುಕ್ ಲಾಗ್ಲ್ಯಾಸಿ ಮನುನ್ ತೆನಿ ಅಮ್ಕಾ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:6
24 ತಿಳಿವುಗಳ ಹೋಲಿಕೆ  

ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು