1 ಥೆಸಲೋನಿಕದವರಿಗೆ 4:11 - ಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಮಿ ತುಮ್ಕಾ ಸಾಂಗಲ್ಲ್ಯಾ ಬಾಸೆನ್ ಸಮಾದಾನಾಚೆ ಜಿವನ್ ಕರಾ, ತುಮ್ಚೆ-ತುಮ್ಚೆ ಕಾಮ್ ಕರಾ, ಅನಿ ತುಮ್ಚ್ಯಾ ಜಿವನಾಸಾಟ್ನಿ ತುಮಿಚ್ ರಾಬುನ್ ಗೊಳಾ ಕರಾ. ಅಧ್ಯಾಯವನ್ನು ನೋಡಿ |