Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:13 - ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಜೆ ಕೊನ್ ಮರ್ಲ್ಯಾತ್ ತೆಂಚ್ಯಾ ವಿಶಯಾತ್ಲೆ ಎಕ್ ಖರೆ ಅಮಿ ತುಮ್ಕಾ ಕಳ್ವುತಾಂವ್, ಕಶ್ಯಾಕ್ ಮಟ್ಲ್ಯಾರ್, ಬರೊಸೊ ನಸಲ್ಲ್ಯಾಂಚ್ಯಾ ಸಾರ್ಕೆ ಹೆಚ್ಯಾ ವಿಶಯಾತ್ ತುಮ್ಕಾ ಬೆಜಾರ್ ಹೊತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:13
35 ತಿಳಿವುಗಳ ಹೋಲಿಕೆ  

ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.


ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ಸಹೋದರರೇ, ಆಸ್ಯ ಸೀಮೆಯಲ್ಲಿ ನಮಗೆ ಸಂಭವಿಸಿದ ಸಂಕಟವನ್ನು ಕುರಿತು ವಿಚಾರಿಸುತ್ತೀರೋ ಅದರಲ್ಲಿ ನಾವು ಬಲವನ್ನು ಮೀರಿದಂಥ ಅತ್ಯಧಿಕವಾದ ಭಾರದಿಂದ ಕುಗ್ಗಿಹೋಗಿ ಜೀವವುಳಿಯುವ ಮಾರ್ಗವನ್ನು ಕಾಣದವರಾದೆವೆಂಬದನ್ನು ನೀವು ತಿಳಿಯಬೇಕೆಂದು ಅಪೇಕ್ಷಿಸುತ್ತೇನೆ.


ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.


ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.


ಸಹೋದರರೇ, ಪವಿತ್ರಾತ್ಮದಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ಅಪೇಕ್ಷಿಸುತ್ತೇನೆ.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


(ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು, ಅಣ್ಣತಮ್ಮಂದಿರು ಇವರಿಗೋಸ್ಕರ ಈ ವಿಧಿ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು