Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:3 - ಕನ್ನಡ ಸತ್ಯವೇದವು J.V. (BSI)

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಪವಿತ್ರ್ ಅನಿ ಅನೈತಿಕ್ ಲೈಂಗಿಕ್ ಸಮಂದಾಚ್ಯಾ ಬುರ್ಸ್ಯಾಪಾನಾತ್ನಾ ಎಗ್ದಮ್ ಬರೆ ಹೊಲ್ಲೆ ದೆವಾಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:3
47 ತಿಳಿವುಗಳ ಹೋಲಿಕೆ  

ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡದೆ ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.


ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.


ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು