Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:1 - ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಈ ಸಂಗತಿಗಳು ನಡೆಯಬೇಕಾದ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವದು ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು, ಖಲ್ಯಾ ಎಳಾರ್ ಅನಿ ಖಲ್ಯಾ ದಿಸಿ ಹೆ ಸಗ್ಳೆ ಘಡ್ನಾರ್ ಹಾಯ್ ಮನುನ್ ಎಳ್ ಅನಿ ಕಾಲ್ ಮಿಯಾ ತುಮ್ಕಾ ಲಿವ್ತಲಿ ಗರಜ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:1
8 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.


ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ದೇವಜನರಿಗೋಸ್ಕರ ನಡೆಯುವ ಸಹಾಯಕಾರ್ಯವನ್ನು ಕುರಿತು ನಿಮಗೆ ಬರೆಯುವದಕ್ಕೆ ಅವಶ್ಯವಿಲ್ಲ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು