1 ಥೆಸಲೋನಿಕದವರಿಗೆ 5:14 - ಕನ್ನಡ ಸತ್ಯವೇದವು J.V. (BSI)14 ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮ್ಚ್ಯಾ ಭಾವಾ-ಭೆನಿಯಾನು, ಅಮಿ ತುಮ್ಚ್ಯಾಕ್ಡೆ ಲೈ ಮಾಗ್ತಾಂವ್, ಕಾಮ್ ಕರಿನಸ್ತಾನಾ ರ್‍ಹಾತಲ್ಯಾಕ್ನಿ ಉಶಾರ್ಕಿ ಸಾಂಗಾ, ಭಿಂವ್ಕುರ್ಯ್ಯಾಕ್ನಿ ಧೈರೊ ದಿವಾ, ಬಳನಸಲ್ಯಾಕ್ನಿ ಮಜತ್ ಕರಾ, ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ. ಅಧ್ಯಾಯವನ್ನು ನೋಡಿ |