Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:44 - ಕನ್ನಡ ಸತ್ಯವೇದವು J.V. (BSI)

44 ಬೆಳನು ಸತ್ತ ಮೇಲೆ ಬೊಚ್ರದವನಾದ ಜೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಚ್ರ ಎಂಬ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:44
5 ತಿಳಿವುಗಳ ಹೋಲಿಕೆ  

ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು