Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:7 - ಕನ್ನಡ ಸತ್ಯವೇದವು J.V. (BSI)

7 ಯಾವಾನನ ಸಂತಾನದವರು - ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾವಾನನ ಗಂಡುಮಕ್ಕಳು: ಎಲೀಷ, ತಾರ್ಷೀಷ್, ಕಿತ್ತೀಮ್ ಮತ್ತು ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:7
12 ತಿಳಿವುಗಳ ಹೋಲಿಕೆ  

ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.


ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಗೋಮೆರನ ಸಂತಾನದವರು - ಅಷ್ಕೆನಜ್, ರೀಫತ್, ತೋಗರ್ಮ ಎಂಬವರು.


ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂಟ್, ಕಾನಾನ್ ಎಂಬವರೇ.


ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು