Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:5 - ಕನ್ನಡ ಸತ್ಯವೇದವು J.V. (BSI)

5 ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನ ಆಯುಧ ಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:5
4 ತಿಳಿವುಗಳ ಹೋಲಿಕೆ  

ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಮನೆಯವರೆಲ್ಲರೂ ಅದೇ ದಿವಸದಲ್ಲಿ ಸತ್ತರು.


ಸೌಲನು ಸತ್ತದ್ದನ್ನು ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು