Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:9 - ಕನ್ನಡ ಸತ್ಯವೇದವು J.V. (BSI)

9 ಸೌಲನಿಗಿರುವದನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ದೇವತೆಗಳಿಗೂ ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನ ಶರೀರದ ಮೇಲಿದ್ದ ಬೆಲೆಬಾಳುವ ವಸ್ತುಗಳನ್ನು ಅವರು ದೋಚಿಕೊಂಡರು; ಅವನ ತಲೆಯನ್ನೂ ಆಯುಧಗಳನ್ನೂ ತೆಗೆದುಕೊಂಡು ತಮ್ಮ ಊರಿನಲ್ಲಿದ್ದ ಜನರಿಗೂ ಅವರ ಸುಳ್ಳುದೇವರುಗಳಿಗೂ ತಿಳಿಸಲು ಸಂದೇಶಕರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:9
9 ತಿಳಿವುಗಳ ಹೋಲಿಕೆ  

ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು.


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು


ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು