1 ಪೂರ್ವಕಾಲ ವೃತ್ತಾಂತ 11:10 - ಕನ್ನಡ ಸತ್ಯವೇದವು J.V. (BSI)10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.