Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:14 - ಕನ್ನಡ ಸತ್ಯವೇದವು J.V. (BSI)

14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:14
9 ತಿಳಿವುಗಳ ಹೋಲಿಕೆ  

ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.


ಫಿಲಿಷ್ಟಿಯರು ಪಸ್ದಮ್ಮೀವಿುನಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು; ಇಸ್ರಾಯೇಲ್ಯರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಲು


ದಾವೀದನು ಅದುಲ್ಲಾಮ್‍ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು