1 ಪೂರ್ವಕಾಲ ವೃತ್ತಾಂತ 11:19 - ಕನ್ನಡ ಸತ್ಯವೇದವು J.V. (BSI)19 ಆದರೆ ಅವನು ಅದನ್ನು ಕುಡಿಯಲೊಲ್ಲದೆ - ತಮ್ಮ ಜೀವವನ್ನು ಸಮರ್ಪಿಸಿದ ಈ ಪುರುಷರ ರಕ್ತವನ್ನು ನಾನು ಕುಡಿಯಲೋ! ನನ್ನ ದೇವರು ಈ ಕಾರ್ಯವನ್ನು ನನಗೆ ದೂರಮಾಡಲಿ. ಅವರು ತಮ್ಮ ಜೀವವನ್ನೇ ಸಮರ್ಪಿಸಿ ಇದನ್ನು ತಂದುಕೊಟ್ಟರು. ನಾನು ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ಅಧ್ಯಾಯವನ್ನು ನೋಡಿ |