Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:20 - ಕನ್ನಡ ಸತ್ಯವೇದವು J.V. (BSI)

20 ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:20
10 ತಿಳಿವುಗಳ ಹೋಲಿಕೆ  

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದದರಿಂದ ಅವರು ಇವನನ್ನು ಕೊಂದುಹಾಕಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಆದರೆ ಅವನು ಅದನ್ನು ಕುಡಿಯಲೊಲ್ಲದೆ - ತಮ್ಮ ಜೀವವನ್ನು ಸಮರ್ಪಿಸಿದ ಈ ಪುರುಷರ ರಕ್ತವನ್ನು ನಾನು ಕುಡಿಯಲೋ! ನನ್ನ ದೇವರು ಈ ಕಾರ್ಯವನ್ನು ನನಗೆ ದೂರಮಾಡಲಿ. ಅವರು ತಮ್ಮ ಜೀವವನ್ನೇ ಸಮರ್ಪಿಸಿ ಇದನ್ನು ತಂದುಕೊಟ್ಟರು. ನಾನು ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.


ಉಳಿದ ಇಬ್ಬರಿಗಿಂತ ಇವನೇ ಘನವಾದವನಾದದರಿಂದ ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು