1 ಪೂರ್ವಕಾಲ ವೃತ್ತಾಂತ 11:3 - ಕನ್ನಡ ಸತ್ಯವೇದವು J.V. (BSI)
3 ಆಗ ಅರಸನಾದ ದಾವೀದನು ತನ್ನ ಹತ್ತಿರ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನಿಂದಾದ ಆಜ್ಞೆಗನುಸಾರವಾಗಿ ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.
3 ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
3 ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.
3 ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.
3 ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.
ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.
ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇವಿುಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ವಿುಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ.