Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:8 - ಕನ್ನಡ ಸತ್ಯವೇದವು J.V. (BSI)

8 ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:8
8 ತಿಳಿವುಗಳ ಹೋಲಿಕೆ  

ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ


ಸೊಲೊಮೋನನ ಬಿಟ್ಟೀಕೆಲಸದವರು ಕಟ್ಟಿದವುಗಳು ಯಾವವಂದರೆ - ಯೆಹೋವನ ಆಲಯ, ಅರಮನೆ, ವಿುಲ್ಲೋಕೋಟೆ, ಯೆರೂಸಲೇವಿುನ ಪೌಳಿಗೋಡೆ, ಹಾಚೋರ್, ಮೆಗಿದ್ದೋ, ಗೆಜೆರ್ ಇವೇ.


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.


ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು.


ಸೈನ್ಯಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು