Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:9 - ಕನ್ನಡ ಸತ್ಯವೇದವು J.V. (BSI)

9 ಸೈನ್ಯಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ದಿನದಿಂದ ದಿನಕ್ಕೆ ಬಲಶಾಲಿಯಾದನು. ಸರ್ವಶಕ್ತನಾದ ದೇವರು ಅವನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:9
13 ತಿಳಿವುಗಳ ಹೋಲಿಕೆ  

ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.


ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು