1 ಪೂರ್ವಕಾಲ ವೃತ್ತಾಂತ 12:19 - ಕನ್ನಡ ಸತ್ಯವೇದವು J.V. (BSI)19 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿ |