Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:20 - ಕನ್ನಡ ಸತ್ಯವೇದವು J.V. (BSI)

20 ಅವನು ಹಿಂದಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:20
9 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.


ಯಾಕೀಮ್, ಜಿಕ್ರೀ, ಜಬ್ದೀ, ಎಲೀಗೇನೈ, ಚಿಲ್ಲೆತೈ,


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ರಣವೀರರೂ ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.


ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು