1 ಪೂರ್ವಕಾಲ ವೃತ್ತಾಂತ 12:32 - ಕನ್ನಡ ಸತ್ಯವೇದವು J.V. (BSI)32 ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು); ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು. ಅಧ್ಯಾಯವನ್ನು ನೋಡಿ |