Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:33 - ಕನ್ನಡ ಸತ್ಯವೇದವು J.V. (BSI)

33 ಜೆಬುಲೂನ್ಯರಿಂದ ಯುದ್ಧಪ್ರವೀಣರೂ ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ ದೃಢಚಿತ್ತರೂ ಆದ ಐವತ್ತು ಸಾವಿರ ಮಂದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಜೆಬುಲೂನ್ ಕುಲದಿಂದ ಐವತ್ತು ಸಾವಿರ ನುರಿತ ಸೈನಿಕರು ಬಂದರು. ಅವರು ಎಲ್ಲಾ ತರಹ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದವರು. ಇವರು ದಾವೀದನಿಗೆ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:33
6 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ನಫ್ತಾಲಿಯರಿಂದ ಸಾವಿರ ಮಂದಿ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಮಂದಿ ಸೈನಿಕರೂ;


ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಆಶೇರ್ಯರಿಂದ ಕಾಳಗಕ್ಕೆ ಸಿದ್ಧರಾದ ನಾಲ್ವತ್ತು ಸಾವಿರ ಮಂದಿ ಯುದ್ಧನಿಪುಣರು;


ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು