1 ಪೂರ್ವಕಾಲ ವೃತ್ತಾಂತ 12:39 - ಕನ್ನಡ ಸತ್ಯವೇದವು J.V. (BSI)39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿ |
ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.