Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:3 - ಕನ್ನಡ ಸತ್ಯವೇದವು J.V. (BSI)

3 ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:3
11 ತಿಳಿವುಗಳ ಹೋಲಿಕೆ  

ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.


ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.


ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು -


ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.


ಇಸ್ರಾಯೇಲ್ ಸಮಸ್ತಸಮೂಹದವರಿಗೆ - ನಿಮ್ಮ ಸಮ್ಮತಿಯೂ ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವದಾದರೆ ನಾವು ಎಲ್ಲಾ ಇಸ್ರಾಯೇಲ್‍ಪ್ರಾಂತಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಶೀಘ್ರವಾಗಿ ಕರೇಕಳುಹಿಸೋಣ.


ಅವರೆಲ್ಲರೂ ಆ ಮಾತಿಗೆ ಮೆಚ್ಚಿ ಅದರಂತೆ ಮಾಡಬೇಕೆಂದು ಹೇಳಿದರು.


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು