Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:13 - ಕನ್ನಡ ಸತ್ಯವೇದವು J.V. (BSI)

13 ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:13
13 ತಿಳಿವುಗಳ ಹೋಲಿಕೆ  

ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.


ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು