1 ಪೂರ್ವಕಾಲ ವೃತ್ತಾಂತ 15:28 - ಕನ್ನಡ ಸತ್ಯವೇದವು J.V. (BSI)28 ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |