1 ಪೂರ್ವಕಾಲ ವೃತ್ತಾಂತ 15:29 - ಕನ್ನಡ ಸತ್ಯವೇದವು J.V. (BSI)29 ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿ |