Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:13 - ಕನ್ನಡ ಸತ್ಯವೇದವು J.V. (BSI)

13 ಆತನ ಅದ್ಭುತಕೃತ್ಯ ಮಹತ್ಕಾರ್ಯ ನ್ಯಾಯನಿರ್ಣಯಗಳನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದ ನ್ಯಾಯನಿರ್ಣಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:13
13 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.


ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು