Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:16 - ಕನ್ನಡ ಸತ್ಯವೇದವು J.V. (BSI)

16 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:16
16 ತಿಳಿವುಗಳ ಹೋಲಿಕೆ  

ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು